ಉಡುಪಿ:ಶಿಷ್ಯವೇತನ :ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷದೊಳಗಿನ ಅಭ್ಯರ್ಥಿಗಳಿಂದ ಶಿಷ್ಯವೇತನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಸಂದರ್ಶನದ ಬದಲಿಗೆ ಅಭ್ಯರ್ಥಿಗಳು ಅರ್ಜಿಯಲ್ಲಿ ನೀಡಿರುವ ಪಠ್ಯಕ್ರಮವನ್ನು ಮೊಬೈಲ್ / ವೀಡಿಯೋ ಚಿತ್ರೀಕರಿಸಿ, ಪೆನ್‌ಡ್ರೆöÊವ್‌ನಲ್ಲಿ
ಅಳವಡಿಸಿ, ಪೆನ್‌ಡ್ರೈವ್‌ನೊಂದಿಗೆ ಅರ್ಜಿಯನ್ನು ರಿಜಿಸ್ಟಾçರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು ಇಲ್ಲಿಗೆ ಡಿಸೆಂಬರ್ 20 ರ ಒಳಗಾಗಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://Sangeetanrityaacademy.karnataka.gov.in ಅಥವಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ
ಕಚೇರಿ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟಾçರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.