ಅಟಲ್ ಜೀ ರಾಷ್ಟ್ರೀಯತೆ ಚಿಂತನೆ ಸಾಕಾರಗೊಳಿಸಲು ಜೀವನ‌ ಮುಡಿಪಾಗಿಟ್ಟವರು: ಮಟ್ಟಾರು ರತ್ನಾಕರ್ ಹೆಗ್ಡೆ

ಉಡುಪಿ: ಅಟಲ್ ಬಿಹಾರಿ ವಾಜಪೇಯಿ ಅವರು ಈ ದೇಶ ಕಂಡ ಅಪ್ರತಿಮ ನಾಯಕರಾಗಿದ್ದು, ರಾಷ್ಟ್ರೀಯತೆ
ಚಿಂತನೆಗಳನ್ನು ಸಾಕಾರ ಗೊಳಿಸುವಲ್ಲಿ ಜೀವನವನ್ನೇ ಮುಡಿಪಾಗಿಟ್ಟವರು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ ಹೇಳಿದರು.
ಅವರು ಬುಧವಾರ ಉಡುಪಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಿದ ಭಾರತದ ಮಾಜಿ ಪ್ರಧಾನಿ ಹಾಗೂ ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪಕ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ
ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ಈ ದೇಶವನ್ನು ಅಭಿವೃದ್ಧಿಯ ಪಥಕ್ಕೆ ತರುವಲ್ಲಿ ತಮಗೆ ಸಿಕ್ಕಿದ ಅಲ್ಪ ಅವಕಾಶದಲ್ಲಿ ಸಾಕಷ್ಟು ಯಶಸ್ಸನ್ನು ಕಂಡು ಕೊಂಡಿದ್ದರು. ರಾಷ್ಟ್ರೀಯತೆಯ ಪರಿಕಲ್ಪನೆಗಳನ್ನು ಜಾರಿಗೆ ತರುವಲ್ಲಿ ತಮ್ಮ ಹೆಜ್ಜೆ ಜಾಡುಗಳನ್ನು ಮೂಡಿಸಿದವರು. ದೇಶದಲ್ಲಿ ಬಿಜೆಪಿ ಪಕ್ಷವು ಬಹುಮತವನ್ನು ಸಾದಿಸಿ ಸ್ವಂತ ಬಲದಿಂದ ಆಡಳಿತ ನಡೆಸುವಂತಹ ಕನಸನ್ನು ಕಂಡವರು. ಇಂದು ಅವರು ಕಂಡಂತಹ ಕನಸುಗಳು ನನಸುಗುತ್ತಿವೆ. ಅವರ ಹೆಜ್ಜೆ ಜಾಡುಗಳು ಮತ್ತೆ ಗೋಚರವಾಗುತ್ತಿವೆ ಎಂದರು.
ಶಾಸಕ ಕೆ. ರಘುಪತಿ ಭಟ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಪ್ರಧಾನ ಕಾರ್ಯದರ್ಶಿ ಗಿರೀಶ್ ಅಂಚನ್, ನಗರ ಬಿಜೆಪಿ ಅಧ್ಯಕ್ಷ ಪ್ರಭಾಕರ್ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷ ರಾಘವೇಂದ್ರ ಕಿಣಿ, ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಪ್ರದಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ, ನಗರ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್,  ನಗರಸಭಾ ಸದಸ್ಯರಾದ ಸಂತೋಷ್ ಜತ್ತನ್, ಚಂದ್ರಶೇಖರ್, ಮಂಜುನಾಥ್ ಮಣಿಪಾಲ, ಪಕ್ಷದ ಪ್ರಮುಖರಾದ ಚಂದ್ರಶೇಖರ್ ಪ್ರಭು, ಕಿಶೋರ್ ಕರಂಬಳ್ಳಿ, ದೀಪಕ್ ಶೇಟ್, ದಿನೇಶ್ ಅಮೀನ್, ರೋಷನ್ ಶೆಟ್ಟಿ, ಪ್ರತಾಪ್ ಶೆಟ್ಟಿ ಮತ್ತಿತರರು ಹಾಜರಿದ್ದರು.