ಕೋಟ: ಆಟೋ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಸಾಲಿಗ್ರಾಮದ ಹಾಡಿಮನೆ ಹೊಟೇಲ್ ಮುಂಬಾಗ ನಡೆದಿದೆ. ರಿಕ್ಷಾ ಚಾಲಕ, ಕಾರ್ಕಡ ನಿವಾಸಿ ಭೋಜ ಪೂಜಾರಿ(52) ಮೃತರು.
ಆಟೋ ರಿಕ್ಷಾ ಪಲ್ಟಿಯಾದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದ್ದಾರೆ.ಮೃತರು ಸಾಲಿಗ್ರಾಮ ರಿಕ್ಷಾ ಚಾಲಕ, ಮಾಲಕರ ಸಂಘದ ಪದಾಧಿಕಾರಿಯಾಗಿ, ಹಲವಾರು ಸಂಘ ಸಂಸ್ಥೆಗಳಲ್ಲಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

















