ಉಡುಪಿ:ಸಂಶೋಧನೆ / ವಿಮರ್ಶಾ ಗ್ರಂಥಕ್ಕೆ ಬಹುಮಾನ : ಅರ್ಜಿ ಆಹ್ವಾನ

ಉಡುಪಿ: ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ಕನಕ ಸಾಹಿತ್ಯ, ದಾಸ ಸಾಹಿತ್ಯ ಹಾಗೂ ತತ್ವಪದ ಸಾಹಿತ್ಯ ಕುರಿತ ಸಂಶೋಧನೆ ಅಥವಾ ವಿಮರ್ಶಾ ಗ್ರಂಥವೊAದಕ್ಕೆ ಬಹುಮಾನ ನೀಡುವ ಯೋಜನೆ ರೂಪಿಸಿದ್ದು, 2024 ನೇ ಸಾಲಿನಲ್ಲಿ ಪ್ರಕಟವಾದ ಪ್ರಥಮ ಮುದ್ರಣದ ಗ್ರಂಥವನ್ನು ಬಹುಮಾನಕ್ಕೆ ಪರಿಗಣಿಸಲಾಗುತ್ತಿದ್ದು, ವೆಬ್‌ಸೈಟ್ https://kanakadasaresearchcenter.karnataka.gov.in/ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಬಹುಮಾನಕ್ಕೆ ಗ್ರಂಥ ಲೇಖಕರು, ಪ್ರಕಾಶಕರು ಸೆಪ್ಟಂಬರ್ 10 ರ ಒಳಗಾಗಿ ಸಂತಕವಿ ಕನಕದಾಸ ಮತ್ತು ತತ್ವ ಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಇಲ್ಲಿಗೆ ಅರ್ಜಿಯನ್ನು ಅಂಚೆ/ಕೊರಿಯರ್ ಅಥವಾ ಖುದ್ದಾಗಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 6364529319 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೇಂದ್ರದ ಸದಸ್ಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.