ಉಡುಪಿ: ಪ್ರಸಕ್ತ ಸಾಲಿನಲ್ಲಿ ಬಿ.ಇಡಿ ವ್ಯಾಸಾಂಗಕ್ಕಾಗಿ ಸರ್ಕಾರದಿಂದ ಮಾನ್ಯತೆ ಪಡೆದ ರಾಜ್ಯದ ಸರ್ಕಾರಿ,ಅನುದಾನಿತ ಹಾಗೂ ಅನುದಾನ ರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದಡಿ ಸೀಟುಗಳ ದಾಖಲಾತಿಗಾಗಿ ಇಲಾಖಾ ವೆಬ್ಸೈಟ್ https://www.schooledecation.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 3 ಕೊನೆಯ ದಿನ. ಜಿಲ್ಲಾ ನೋಡೆಲ್ ಕೇಂದ್ರವಾಗಿ ಡಯಟ್ ಉಡುಪಿ ಕಾರ್ಯನಿರ್ವಹಿಸಲಿದ್ದು, ಅಭ್ಯರ್ಥಿಗಳು
ಅರ್ಜಿ ಸಲ್ಲಿಸಿದ ಏಳು ದಿನಗಳ ಒಳಗಾಗಿ ಕಡ್ಡಾಯವಾಗಿ ಮೂಲ ದಾಖಲೆಗಳೊಂದಿಗೆ ಸಂಸ್ಥೆಯಲ್ಲಿ ಪರಿಶೀಲನೆಗಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸೋನಿಕ್ ಟಿ ಮೊ.ನಂ: 9901236348 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ
ಸಂಸ್ಥೆಯ ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.

















