ಉಡುಪಿ: ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿ ವತಿಯಿಂದ ಜಿಲ್ಲೆಯ 25 ಕನ್ನಡ ಮಾಧ್ಯಮ ಶಾಲೆಗಳಿಗೆ 10 ಲಕ್ಷ ರೂ. ಮೌಲ್ಯದ ನೋಟ್ ಪುಸ್ತಕ, ಸಮವಸ್ತ್ರ ಹಾಗೂ ಆರ್ಥಿಕ ನೆರವು ವಿತರಣೆ ಮಾಡಲಾಯಿತು.
ಅಜ್ಜರಕಾಡು ಪುರಭವನದಲ್ಲಿ ನಡೆದ ಸಮಾರಂಭದಲ್ಲಿ ಶಾಲಾಮಕ್ಕಳಿಗೆ ನೋಟ್ ಪುಸ್ತಕ, ಸಮವಸ್ತ್ರ ನೀಡಲಾಯಿತು.
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡುದರು. ಸೊಸೈಟಿ ಅಧ್ಯಕ್ಷ ಸಂಜೀವ ಕಾಂಚನ್ ಅಧ್ಯಕ್ಷತೆ ವಹಿಸಿದ್ದರು, ಜಿಲ್ಲಾ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಣಪತಿ ಕೆ., ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ. ಉಪಸ್ಥಿತರಿದ್ದರು.