ಉಡುಪಿ: ಕುಸಿದುಬಿದ್ದು ಬ್ಯಾಂಕ್ ಉದ್ಯೋಗಿ ಮೃತ್ಯು

ಉಡುಪಿ: ಬ್ಯಾಂಕ್ ಉದ್ಯೋಗಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಉಡುಪಿಯ ಬೈಲಕೆರೆಯ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದಿದೆ.

ಮೃತರನ್ನು ಗುರುಪ್ರಸಾದ್ ರಾವ್ (43) ಎಂದು ಗುರುತಿಸಲಾಗಿದೆ. ಗುರುಪ್ರಸಾದ್ ಬ್ಯಾಂಕ್ ಉದ್ಯೋಗಿಯಾಗಿದ್ದು, ರಾತ್ರಿ ವೇಳೆ ಗಂಟಲು ಉರಿ ಕಾಣಿಸಿಕೊಂಡಿತ್ತು. ಬೆಳಿಗ್ಗೆ 3 ಗಂಟೆ ಸುಮಾರಿಗೆ ಫ್ಲ್ಯಾಟಿನಲ್ಲಿ ಹಠಾತ್ ಕುಸಿದು ಬಿದ್ದಿದ್ದರು ಎನ್ನಲಾಗಿದೆ.

ಕೂಡಲೇ ಅವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ಗುರುಪ್ರಸಾದ್ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಅವರು ಹೃದಯಾಘಾತದಿಂದಲೋ ಅಥವಾ ಇನ್ನಾವುದೋ ಖಾಯಿಲೆಯಿಂದ ಮೃತಪಟ್ಟಿರಬಹುದು ಶಂಕಿಸಲಾಗಿದೆ. ಮೃತರ ಅಕ್ಕ ಜ್ಯೋತಿ ಜಿ. ನಾಯಕ್ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.