ಮೂರು ತಿಂಗಳ ಗೃಹಲಕ್ಷ್ಮಿ ಹಣ ಮೇ ತಿಂಗಳಲ್ಲಿ ಬಿಡುಗಡೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಬಾಕಿ ಉಳಿದಿರುವ ಮೂರು ತಿಂಗಳ ಜನವರಿ ಫೆಬ್ರವರಿ ಮಾರ್ಚ್ ಗ್ರಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದೆ ಒಂದು ವಾರ ಒಂದು ತಿಂಗಳ ಹಣ ಮತ್ತೊಂದು ವಾರ ಮತ್ತೊಂದು ತಿಂಗಳ ಹಣವನ್ನು ಗೃಹಲಕ್ಷ್ಮಿಯರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.