ಉಡುಪಿ: ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿ ಎಂಜಿಎಂ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಬಾಗಲಕೋಟೆ ನಿವಾಸಿ ರಂಗಪ್ಪ (62) ಮೃತದುರ್ದೈವಿ. ಅವರು ಎಂಜಿಎಂ ಕಾಲೇಜಿನ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.
ಅವರು ರಸ್ತೆ ದಾಟುತ್ತಿದ್ದ ವೇಳೆ ಅತೀ ವೇಗವಾಗಿ ಬಂದ ದ್ವಿಚಕ್ರವಾಹನ ಡಿಕ್ಕಿ ಹೊಡೆದಿದೆ. ಇದರಿಂದ ಅವರ ತಲೆಗೆ ಗಂಭೀರಗಾಯವಾಗಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಗಾಯಾಳನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದರು. ಬಳಿಕ ಗಾಯಾಳುವಿಗೆ ತುರ್ತು ಹೆಚ್ಚಿನ ಚಿಕಿತ್ಸೆ ಅಗತ್ಯತೆ ಇದ್ದುದರಿಂದ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆಗೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.


















