ಎ.20ರಂದು ಉಡುಪಿ ಬಿಜೆಪಿ ಅಭ್ಯರ್ಥಿ ಯಶಪಾಲ್ ಸುವರ್ಣ ನಾಮಪತ್ರ ಸಲ್ಲಿಕೆ: ನಗರದಲ್ಲಿ ಕುಯಿಲಾಡಿ ಮಾಹಿತಿ

ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶಪಾಲ್ ಸುವರ್ಣ ಅವರು ಎ.20ರಂದು ನಾಮಪತ್ರ ಸಲ್ಲಿಸಲಿದ್ದು, ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಉಡುಪಿಯ ಕಿದಿಯೂರು‌ ಹೋಟೆಲ್ ನಲ್ಲಿ‌ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ಕಡಿಯಾಳಿಯ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ. ಬಳಿಕ 10ಗಂಟೆಗೆ ಕಡಿಯಾಳಿಯಿಂದ ಬನ್ನಂಜೆಯ ತಾಲೂಕು ಕಚೇರಿ ತನಕ ಪಾದಯಾತ್ರೆಯ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಾಗುವುದು.

ಈ ಸಂದರ್ಭದಲ್ಲಿ 10ಸಾವಿರಕ್ಕೂ ಅಧಿಕ ಕಾರ್ಯ್ತಕರ್ತರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ರಘುಪತಿ‌ ಭಟ್, ನಗರಾಧ್ಯಕ್ಷ ಮಹೇಶ್ ಠಾಕೂರ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.