udupixpress
Home Trending ಸುರೇಶ್ ನಾಯಕ್ ಈ ಹಿಂದೆಯೇ ಪಕ್ಷದಿಂದ ಉಚ್ಚಾಟನೆಗೊಂಡಿದ್ದಾರೆ: ಕುಯಿಲಾಡಿ

ಸುರೇಶ್ ನಾಯಕ್ ಈ ಹಿಂದೆಯೇ ಪಕ್ಷದಿಂದ ಉಚ್ಚಾಟನೆಗೊಂಡಿದ್ದಾರೆ: ಕುಯಿಲಾಡಿ

ಉಡುಪಿ: ಗುರುವಾರ (ಸೆ. 3) ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ತೆಂಕನಿಡಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುರೇಶ್ ನಾಯಕ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಈ ಹಿಂದೆಯೇ ಬಿಜೆಪಿಯಿಂದ ಅಮಾನತು ಮಾಡಲಾಗಿತ್ತು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಗ್ರಾಮ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತದಾನ ಮಾಡದೇ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲಿ ಸುರೇಶ್ ನಾಯಕ್ ಅವರನ್ನು ಬಿಜೆಪಿ ಪಕ್ಷದಿಂದ ಆರು ವರ್ಷ ಕಾಲ ಉಚ್ಚಾಟಿಸಲಾಗಿದೆ. ಹಾಗಾಗಿ ಅವರಿಗೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.