udupixpress
Home Trending ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಹಾಗೂ ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ

ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಹಾಗೂ ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ

ಉಡುಪಿ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶಾಸಕ ಕೆ. ರಘುಪತಿ ಭಟ್ ರವರು ಇಂದು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಹಾಗೂ ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಭಾವಚಿತ್ರಗಳಿಗೆ ಪುಷ್ಪಾರ್ಚನೆಯನ್ನು ಮಾಡಿ ಅತ್ಯಂತ ಸರಳವಾಗಿ  ಉಡುಪಿ ಜಿಲ್ಲಾ ಮತ್ತು ನಗರ ಬಿಜೆಪಿ ಪರವಾಗಿ ಬಿಜೆಪಿ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಿದರು.

ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್,  ಮಾಜಿ ಅಧ್ಯಕ್ಷ ರಾಘವೇಂದ್ರ ಕಿಣಿ , ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ  ಸುಶಾಂತ್ ಕುಮಾರ್, ಪದಾಧಿಕಾರಿಗಳಾದ ಯೋಗೀಶ್ ದೇವಾಡಿಗ, ವಿನಾಯಕ್ ಶೇಟ್, ಪ್ರಜಿತ್ ಕಲ್ಮಾಡಿ, ಜಿಲ್ಲಾ ಪತ್ರಿಕಾ ವಕ್ತಾರ ಗಿರೀಶ್ ಅಂಚನ್, ಕಚೇರಿ ಕಾರ್ಯದರ್ಶಿ ಚಂದ್ರಶೇಖರ್ ಪ್ರಭು, ನಗರಸಭಾ ಸದಸ್ಯರಾದ ಮಂಜುನಾಥ್ ಮಣಿಪಾಲ, ರಜನಿ ಹೆಬ್ಬಾರ್ ಉಪಸ್ಥಿತರಿದ್ದರು.

error: Content is protected !!