ಉಡುಪಿ: ಬಿಜೆಪಿ ‘ಜನಸೇವಕ ಸಮಾವೇಶ’ ಇಂದು

ಉಡುಪಿ: ರಾಜ್ಯ ಬಿಜೆಪಿಯ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಉಡುಪಿ ಜಿಲ್ಲಾಮಟ್ಟದ ‘ಜನಸೇವಕ ಸಮಾವೇಶ’ ಇಂದು (ಜ.12) ಬೆಳಿಗ್ಗೆ 10.30ಕ್ಕೆ ಉಡುಪಿಯ ಪುತ್ತೂರು-ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜನಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಅರವಿಂದ ಲಿಂಬಾವಳಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿ ಕುಮಾರ್, ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಮತ್ತು ಸಂಸದ ಈರಣ್ಣ ಕಡಾಡಿ ಸಹಿತ ಜಿಲ್ಲೆಯ ಸಂಸದರು, ಸಚಿವರು, ಶಾಸಕರು
ಪಕ್ಷದ ಮುಖಂಡರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ.
ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ನಿಗಮ-ಮಂಡಳಿ ಪ್ರಾಧಿಕಾರಗಳ ಅಧ್ಯಕ್ಷರು, ಸದಸ್ಯರು ಹಾಗೂ ನೂತನ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಈ ಜನ ಸೇವಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.