ಉಡುಪಿ: ಬ್ಲ್ಯಾಕ್ ಫಂಗಸ್ ಗೆ ಇಬ್ಬರು ಬಲಿ

ಉಡುಪಿ: ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ರೋಗಿಗಳು ಮೃತಪಟ್ಟಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್‌ಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೇರಿದೆ.

ಚಿತ್ರದುರ್ಗ ಜಿಲ್ಲೆಯ 45 ವರ್ಷ ಪ್ರಾಯದ ಪುರುಷ ಹಾಗೂ ಹಾವೇರಿ ಜಿಲ್ಲೆಯ 43 ವರ್ಷ ಪ್ರಾಯದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಮೊದಲು ಉಡುಪಿ ಜಿಲ್ಲೆಯ ಇಬ್ಬರು ಬ್ಲ್ಯಾಕ್ ಫಂಗಸ್ ನಿಂದ ಅಸುನೀಗಿದ್ದರು.

ಜಿಲ್ಲೆಯಲ್ಲಿ ಒಟ್ಟು ಎಂಟು ಮಂದಿ ಕಪ್ಪು ಶಿಲೀಂದ್ರ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದು, ಇವರಲ್ಲಿ ಆರು ಮಂದಿ ಮಣಿಪಾಲ ಕೆಎಂಸಿ ಅಸ್ಪತ್ರೆಯಲ್ಲಿ  ಹಾಗೂ ಇಬ್ಬರು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರಲ್ಲಿ ಬೈಂದೂರು ತಾಲೂಕು ಮಯ್ಯಾಡಿಯ 55 ವರ್ಷ ಪ್ರಾಯದ ಮಹಿಳೆಯೊಬ್ಬರು ಮಾತ್ರ ಉಡುಪಿ ಜಿಲ್ಲೆಯವರಾಗಿದ್ದು, ಉಳಿದ ಆರು ಮಂದಿ ಹೊರ ಜಿಲ್ಲೆಯವರು ಎಂದು ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.