ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 226 ಬೂತ್‌ಗಳಿದ್ದು, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಸುಮಾರು 132 ಬೂತ್‌ಗಳಿವೆ. ಈ 132 ಬೂತ್‌ಗಳಿಗೆ ಬೂತ್ ಲೆವೆಲ್ ಏಜೆಂಟ್-2 (B.L.A-2) ಈಗಾಗಲೇ ಆಯ್ಕೆಯಾಗಿದ್ದು 132 ಬೂತ್‌ಗಳ B.L.A-2 ಮತ್ತು ಬೂತ್ ಅಧ್ಯಕ್ಷರ ಸಭೆಯನ್ನು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಫೆ. 21 ರಂದು ಸಂಜೆ 3.00 ಗಂಟೆಗೆ ಕರೆಯಲಾಗಿದೆ.
ಈ ಸಭೆಯಲ್ಲಿ ಲೋಕಸಭಾ ಸದಸ್ಯ, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಸ್ತುವಾರಿ ಪ್ರತಾಪನ್ನ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ, ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಅಭಯ್‌ಚಂದ್ರ ಜೈನ್, ಮಾಜಿ ಶಾಸಕರಾದ ಗೋಪಾಲ ಪೂಜಾರಿ ಹಾಗೂ ಯು ಆರ್ ಸಭಾಪತಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಎಂ ಏ ಗಫೂರ್, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಯ ನಾಯಕರು ಹಾಗೂ ಕಾರ್ಯಕರ್ತರು, ಉಡುಪಿ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿಗಳು ಉಪಸ್ಥಿತರಿರುವರೆಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.