udupixpress
Home Trending ಡಿ. 6ಕ್ಕೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಾಲೋಚನೆ ಸಭೆ

ಡಿ. 6ಕ್ಕೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಾಲೋಚನೆ ಸಭೆ

ಉಡುಪಿ: ಗ್ರಾಮ ಪಂಚಾಯತ್ ಚುನಾವಣೆಯ ಬಗ್ಗೆ ಸಮಾಲೋಚಿಸಲು ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಪಕ್ಷದ ಸರ್ವ ಕಾರ್ಯಕರ್ತರ ಮತ್ತು ಪಕ್ಷದ ಪ್ರಮುಖರ ಸಭೆಯನ್ನು ಡಿಸೆಂಬರ್ 6ರಂದು ಸಂಜೆ 4 ಗಂಟೆಗೆ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಕರೆಯಲಾಗಿದೆ.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಭಾಗವಹಿಸುವರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ ಅಧ್ಯಕ್ಷತೆ ವಹಿಸುವರು ಎಂದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.