ಉಡುಪಿ: ಕರ್ನಾಟಕ ಜಾನಪದ ಅಕಾಡೆಮಿಯ ವತಿಯಿಂದ 2024 ನೇ ಸಾಲಿನಲ್ಲಿ ಜನವರಿ 1 ರಿಂದ ಡಿಸೆಂಬರ್ 31
ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಿರುವಂತೆ, ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ ಹಾಗೂ ಜನಪದ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ
ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಲೇಖಕರು, ಪ್ರಕಾಶಕರು, ಸಂಪಾದಕರು ತಮ್ಮ 1 ಕೃತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಇವರಿಗೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.












