ಆ.15ರಂದು ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದಿಂದ “ಆಟಿಡೊಂಜಿ ವಿಪ್ರಕೂಟ”

ಉಡುಪಿ: ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ “ಆಟಿಡೊಂಜಿ ವಿಪ್ರಕೂಟ” ಸಾಂಸ್ಕೃತಿಕ ಹಬ್ಬವನ್ನು ಇದೇ ಆ.15ರಂದು ಕನ್ನರ್ಪಾಡಿ ಶ್ರೀದೇವಿ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಶ್ರೀಕಾಂತ್ ಉಪಾಧ್ಯ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬೆಳಿಗ್ಗೆ 8.30ಕ್ಕೆ ಧ್ವಜಾರೋಹಣ, ಬೆಳಿಗ್ಗೆ 9.30ಕ್ಕೆ ಉದ್ಘಾಟನೆ ಮತ್ತು ಸಾಧಕರಿಗೆ ಸನ್ಮಾನ, 10.30ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಮಾಹೆಯ ಉಪ ಕುಲಪತಿ ಡಾ. ಶರತ್ ಕೆ ರಾವ್, ಮಣಿಪಾಲ ಮುನಿಯಾಲು ಆಯುರ್ವೇದ ಕಾಲೇಜಿನ ಪ್ರೊ. ಹೆರ್ಗ ಹರಿಪ್ರಸಾದ್ ಭಟ್, ಮಾಜಿ ಶಾಸಕ ರಘುಪತಿ ಭಟ್, ಉದ್ಯಮಿಗಳಾದ ರಮೇಶ್ ಬೀಡು, ಕೃಷ್ಣ ರಾವ್ ಕೊಡಂಚ, ನಟಿ ರಾಧಿಕಾ ನಾರಾಯಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಭಾರ್ಗವ್, ಕೋಶಾಧಿಕಾರಿ ಹಯವದನ ಭಟ್, ಉಪಾಧ್ಯಕ್ಷ ಶ್ರೀನಿವಾಸ ಬಲ್ಲಾಳ್, ವಲಯ ಕಾರ್ಯದರ್ಶಿ ರಾಜೇಂದ್ರ ಕಿನ್ನಿಮೂಲ್ಕಿ ಉಪಸ್ಥಿತರಿದ್ದರು.