ಬ್ರಹ್ಮಾವರ: ವೇಗವಾಗಿ ಚಲಿಸುತ್ತಿದ್ದ ಬೈಕ್ ಗೆ ಢಿಕ್ಕಿಯಾಗಿ ಚಿರತೆ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಂಚಾರು ಎಂಬಲ್ಲಿ ಬುಧವಾರ ತಡರಾತ್ರಿ ನಡೆದಿದೆ.ಬೈಕ್ ಸವಾರರಾಗಿದ್ದ ನಂಚಾರು ಭಾಸ್ಕರ್ ಶೆಟ್ಟಿ ಅವರು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಅಪಘಾತದ ತೀವ್ರತೆಗೆ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


















