ಬ್ರಹ್ಮಾವರ: ಹಿಂದೂ ಸಂಘಟನೆಯ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲು

ಉಡುಪಿ: ಆರೆಸ್ಸೆಸ್ ಮುಖಂಡ ಬಿ.ಎಲ್ ಸಂತೋಷ್ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದಡಿ ಹಿಂದೂ ಸಂಘಟನೆಯ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಶರತ್ ಶೆಟ್ಟಿ ಎಂಬಾತನ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶರತ್ ಶೆಟ್ಟಿ ಈ ಮೊದಲು ವಸಂತ್ ಗಿಳಿಯಾರ್ ಮಾಡಿದ್ದ ಪೋಸ್ಟ್ ನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದ ಎಂದು ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.