ಉಡುಪಿ: ತಾಯಿ ಮತ್ತು ಮಗು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಜಾಲು ಹೆರಂಜೆ ಕ್ರಾಸ್ ಬಳಿ ಸಂಭವಿಸಿದೆ.
ಮೃತರನ್ನು ತಾಯಿ ಸುಷ್ಮೀತಾ (35) ಹಾಗೂ ಮಗು ಶ್ರೇಷ್ಠ ಎಂದು ಗುರುತಿಸಲಾಗಿದೆ. ಮನೆಯ ಸಿಲಿಂಗ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪತಿ ಕೋರ್ಟ್ ಸಂಬಂಧಿತ ಕೆಲಸಕ್ಕಾಗಿ ಬೆಂಗಳೂರಿಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ ಎನ್ನಲಾಗಿದೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












