ಬ್ರಹ್ಮಾವರ: ಟ್ರಕ್ ನ ಚಕ್ರದಡಿ ಸಿಲುಕಿ ಬೈಕ್ ಸವಾರ ಮೃತ್ಯು

ಉಡುಪಿ: ಟ್ರಕ್ ನ ಚಕ್ರದಡಿ ಸಿಲುಕಿ ಬೈಕ್ ನ ಸವಾರನೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರು ಕೆ.‌ಜಿ ರೋಡ್ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

ಮೃತ ಸವಾರ‌ನನ್ನು ಬ್ರಹ್ಮವಾರ ಮಟಪಾಡಿಯ ನಿವಾಸಿ ಅಭಿಷೇಕ್ (25) ಎಂದು ಗುರುತಿಸಲಾಗಿದೆ. ಇವರು‌ ವಿದ್ಯೋದಯ ಪಬ್ಲಿಕ್ ಸ್ಕೂಲ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಚಕ್ರದಡಿಗೆ ಸಿಲುಕಿದ ಪರಿಣಾಮ ಬೈಕ್ ಸವಾರನ ದೇಹವು ಛಿದ್ರಗೊಂಡಿದೆ. ಘಟನಾ ಸ್ಥಳದಲ್ಲಿದ್ದು ಬ್ರಹ್ಮಾವರ ಆರಕ್ಷಕ ಠಾಣೆಯ‌ ಮುಖ್ಯ ಆರಕ್ಷಕ ಮಹಾಲಿಂಗ ಮಹಜರು ಪ್ರಕ್ರಿಯೆ ನಡೆಸಿದರು. ಶವತೆರವು ಹಾಗೂ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು,‌ ಮತ್ತು ಬ್ರಹ್ಮಾವರದ ಅಂಬುಲೆನ್ಸ್ ಚಾಲಕ ನೆರವಾದರು.