ಉಡುಪಿ: ಕರ್ನಾಟಕ ಪುರಸಭಾ ಲೆಕ್ಕಪತ್ರ ಮತ್ತು ಬಜೆಟ್ ನಿಯಮ 2006 ರನ್ವಯ ಉಡುಪಿ ನಗರಸಭೆಯ 2026-27 ನೇ ಸಾಲಿನ ಬಜೆಟ್ ತಯಾರಿಯ ಬಗ್ಗೆ ನಗರಸಭಾ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ಅವಶ್ಯಕ ಅಭಿವೃದ್ಧಿ ಕೆಲಸ ಕಾರ್ಯಗಳ ವಿಚಾರ ವಿನಿಮಯಗಳ ಕುರಿತು ಹಾಗೂ ಸಂಪನ್ಮೂಲ ಕ್ರೋಢೀಕರಣದ ಬಗ್ಗೆ ಮೊದಲನೇ ಸುತ್ತಿನ ಪೂರ್ವಭಾವಿ ಸಾರ್ವಜನಿಕ ಸಮಾಲೋಚನಾ ಸಭೆಯು ಡಿಸೆಂಬರ್ 17 ರಂದು ಬೆಳಗ್ಗೆ 11 ಗಂಟೆಗೆ ನಗರಸಭೆಯ ಸಭಾಂಗಣದಲ್ಲಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧ್ಯಕ್ಷತೆಯಲ್ಲಿ ನಡೆಯಲಿದ್ದು ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡುವಂತೆ ಉಡುಪಿ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

















