ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿಯ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಗೆ ಪ್ರಶಸ್ತಿ

ಉಡುಪಿ: 75ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಗಂಗಾವತಿ ಹಾಗೂ ಗದಗ ಜಿಲ್ಲೆಯಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಇದರ ವಿದ್ಯಾರ್ಥಿಗಳು ಭಾಗವಹಿಸಿ 46 ಪದಕಗಳನ್ನು ಪಡೆದಿದ್ದಾರೆ.

ಅಂಬಲಪಾಡಿ, ಕಡೆಕಾರು, ಅಲೆವೂರು ಹಾಗೂ ಚಿಟ್ಪಾಡಿ ಡೋಜೊ ಇದರ ಬಹುಮಾನ ವಿಜೇತ ವಿದ್ಯಾರ್ಥಿಗಳಿಗೆ ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿಗಳು ಹಾಗೂ ಬೂಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ನ ಗೌರವಾಧ್ಯಕ್ಷರಾದ ಡಾ. ನಿ.ಬೀ. ವಿಜಯ ಬಲ್ಲಾಳ್ ಅವರು ಪದಕ ಹಾಗೂ ಪ್ರಮಾಣ ಪತ್ರವನ್ನು ವಿತರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ದೇವಾಡಿಗರ ಸಂಘ ಚಿಟ್ಪಾಡಿ-ಉಡುಪಿ ಅಧ್ಯಕ್ಷ ರತ್ನಾಕರ ದೇವಾಡಿಗ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಲೆವೂರು ಅಧ್ಯಕ್ಷ ಸಂತೋಷ್ ಪೂಜಾರಿ, ಅಂಬಲಪಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಹಾಗೂ ಬುಡೋಕಾನ್ ಕರಾಟೆ ಎಂಡ್ ‌ಸ್ಪೋರ್ಟ್ಸ್ ಅಸೋಸಿಯೇಶನ್ ಅಧ್ಯಕ್ಷರು ಮತ್ತು ಮುಖ್ಯ ಶಿಕ್ಷಕ ರೆಂಷಿ. ವಾಮನ್ ಪಾಲನ್ ಮತ್ತು ಪ್ರಶಸ್ತಿ ವಿಜೇತ ಕರಾಟೆ ಪಟುಗಳು ಉಪಸ್ಥಿತರಿದ್ದರು.

ರಾಷ್ಟ್ರಮಟ್ಟದ ಕರಾಟೆ ಆನ್ಲೈನ್ ಸ್ಪರ್ಧೆಯಲ್ಲಿ ಭಾಗವಹಿಸಿರುವ 4 ಡೋಜೊಗಳ ವಿದ್ಯಾರ್ಥಿಗಳು 11 ಚಿನ್ನದ ಪದಕ, 8 ಬೆಳ್ಳಿಯ ಪದಕ ಹಾಗೂ 4 ಕಂಚಿನ ಪದಕಗಳನ್ನು ಜಯಿಸಿರುತ್ತಾರೆ.