ಉಡುಪಿ:ಬೈಂದೂರು ಪ.ಪಂ : ಕರಡು ಮತದಾರರ ಪಟ್ಟಿ ಪ್ರಕಟ

ಉಡುಪಿ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ, ಜಿಲ್ಲೆಯ ಬೈಂದೂರು ತಾಲೂಕಿನ ಬೈಂದೂರು ಪಟ್ಟಣ ಪಂಚಾಯತ್ ಸಾರ್ವತ್ರಿಕ ಚುನಾವಣೆ 2025 ಕ್ಕೆ ಸಂಬಂಧಿಸಿದಂತೆ ಭಾವಚಿತ್ರವಿಲ್ಲದ 20 ವಾರ್ಡಿನ ಕರಡು ಮತದಾರರ ಪಟ್ಟಿಯನ್ನು ಸಂಬಂಧಪಟ್ಟ ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಕಛೇರಿಯಲ್ಲಿ, ಬೈಂದೂರು ತಾಲೂಕು ಕಛೇರಿ ಹಾಗೂ ಕುಂದಾಪುರ ಸಹಾಯಕ ಕಮೀಷನರ್ ಕಛೇರಿಯಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ.

ಸದರಿ ಕರಡು ಮತದಾರರ ಪಟ್ಟಿಯನ್ನು ಉಡುಪಿ ಜಿಲ್ಲಾಧಿಕಾರಿಗಳ ಅಧೀಕೃತ ವೆಬ್‌ಸೈಟ್ https://udupi.nic.in/en/ ನಲ್ಲಿ
ಅಪ್‌ಲೋಡ್ ಮಾಡಲಾಗಿದ್ದು, ಕರಡು ಮತದಾರರ ಪಟ್ಟಿಯ ಬಗ್ಗೆ ಆಕ್ಷೇಪಣೆಗಳು ಇದ್ದಲ್ಲಿ ನವೆಂಬರ್ 6 ರ ಒಳಗಾಗಿ ಬೈಂದೂರು ತಾಲೂಕು
ಕಛೇರಿಯಲ್ಲಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.