ಉಡುಪಿ: ರಸ್ತೆ ದಾಟುತ್ತಿದ್ದ ಪಾದಚಾರಿಗಳಿಗೆ ಕಾರು ಡಿಕ್ಕಿ; ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಉಡುಪಿ: ರಸ್ತೆ ದಾಟುತ್ತಿದ್ದ ಪಾದಚಾರಿಗಳಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಉಡುಪಿ ತಾಲೂಕಿನ ಕಡಿಯಾಳಿ ರಾಷ್ಟ್ರೀಯ ಹೆದ್ದಾರಿ 169 ಎ ರಲ್ಲಿ ಗುರುವಾರ ಸಂಜೆ ನಡೆದಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಓರ್ವ ಗರ್ಭಿಣಿ ಸಹಿತ ಮೂವರು‌ ರಸ್ತೆಯ ಎಡಭಾಗದಿಂದ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ಕಡೆಗೆ ರಸ್ತೆ ದಾಟುತ್ತಿದ್ದರು.ಇದೇ ವೇಳೆ ಮಣಿಪಾಲದಿಂದ ಉಡುಪಿ ಕಡೆಗೆ ವೇಗವಾಗಿ ಬರುತ್ತಿದ್ದ ಇನೋವಾ ಕಾರು ಮೂವರಿಗೂ ಡಿಕ್ಕಿ‌ ಹೊಡೆದಿದೆ.

ಕಾರು ಡಿಕ್ಕಿಯಾದ ರಭಸಕ್ಕೆ ಮೂವರು ರಸ್ತೆಗೆ ಬಿದ್ದಿದ್ದು, ಗರ್ಭಿಣಿ ಮಹಿಳೆಯ ತಲೆಗೆ ತೀವ್ರತರದ ಗಾಯವಾಗಿದೆ ಎಂದು‌ ತಿಳಿದುಬಂದಿದೆ. ಅಪಘಾತದ ದೃಶ್ಯಾವಳಿ ಅಲ್ಲೇ ಪಕ್ಕದ ಶೋರೂಮ್ ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.