ಉಡುಪಿ: ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ರಾಜೇಶ್ ಹಾಗೂ ಉಡುಪಿ ಅಗ್ನಿಶಾಮಕ ಠಾಣೆಯ ಸತೀಶ್ ಇವರು ಇಲಾಖೆಯಲ್ಲಿನ ತಮ್ಮ ಉತ್ತಮ ಸೇವೆಗಾಗಿ ಮತ್ತು ತುರ್ತು ಪರಿಸ್ಥಿತಿಯಲ್ಲಿ ನೀಡಿದ ಶ್ರೇಷ್ಠ ಕಾರ್ಯಕ್ಕಾಗಿ 2025 ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಪಡೆದಿದ್ದಾರೆ.
ಬೆಂಗಳೂರಿನ ಆರ್.ಎ ಮುಂಡ್ಕೂರು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತರಬೇತಿ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಕರ್ನಾಟಕ ಸರಕಾರದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪದಕಗಳನ್ನು ನೀಡಿ ಗೌರವಿಸಿದ್ದಾರೆ.

















