ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಕೆ

ಉಡುಪಿ : ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಇಂದು ಚುನಾವಣಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಅವರಿಗೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಶಾಸಕರಾದ ಸುನಿಲ್ ಕುಮಾರ್, ಎಂ.ಪಿ ಕುಮಾರಸ್ವಾಮಿ, ಲಾಲಾಜಿ ಮೆಂಡನ್ ಸಾಥ್ ನೀಡಿದರು.
ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಕರ್ನಾಟಕದಲ್ಲಿ 23 ಕ್ಷೇತ್ರಕ್ಕೂ ಅಧಿಕ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ  ಪ್ರಧಾನಿ ಮಾಡುತ್ತೇವೆ. ನರೇಂದ್ರ ಮೋದಿ ಕೈ ಬಲಪಡಿಸಲು ರಾಜ್ಯದ ಜನ ನಮ್ಮನ್ನು ಬೆಂಬಲಿಸಬೇಕು. ಬರುವಂತಹ ದಿನಗಳಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಸರ್ವತೋಮುಖ ಅಭಿವೃದ್ಧಿಗೆ ನಾವು ಶ್ರಮಿಸಬೇಕಾಗಿದೆ ಎಂದರು.
ಚುನಾವಣೆ ಎನ್ನುವಂತಹದ್ದು ಒಂದು ಯುದ್ಧ. ಈ ಯುದ್ಧವನ್ನು ನಮ್ಮ ಸೇನಾನಿಗಳಾಗಿರುವ  ಕಾರ್ಯಕರ್ತ ಬಂಧುಗಳ ಸಹಕಾರದೊಂದಿಗೆ ದೊಡ್ಡ ಅಂತರದಲ್ಲಿ ಗೆಲ್ಲುತ್ತೇವೆ ಎಂದು ಹೇಳಿದರು.
ಮೀನುಗಾರರ ನಾಪತ್ತೆ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ  ಮಾತನಾಡಿದ್ದು ಕೇಂದ್ರ ಸರ್ಕಾರ ಹುಡುಗಾಟಕ್ಕೆ ಎಲ್ಲಾ ರೀತಿಯ ನೆರವು ನೀಡುವ ಭರವಸೆ ನೀಡಿದೆ. ಆಧುನಿಕ ತಂತ್ರಜ್ಞಾನದ ಮೂಲಕ ಹುಡುಕಾಟ ಮುಂದುವರಿಸಲಿದೆ. ರಾಜ್ಯ ಸರ್ಕಾರ ಏನು ಮಾಡಿದೆ ಎಂಬ ವರದಿಯನ್ನು ಕೇಂದ್ರ ಸರ್ಕಾರಕ್ಕೆ ನೀಡಿಲ್ಲ. ಈ ಚುನಾವಣೆಯ ಸಂದರ್ಭ ನಾನು ಅದರ ಬಗ್ಗೆ ಮಾತನಾಡಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದರು.