ಉಡುಪಿ: ಉಡುಪಿಯ ಚಿಟ್ಟಾಣಿ ಅಭಿಮಾನಿ ಬಳಗದಿಂದ ಕೊಡಲ್ಪಡುವ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಗೆ ಹಿರಿಯ ಸ್ತ್ರೀವೇಷಧಾರಿ ಉತ್ತರ ಕನ್ನಡ ಜಿಲ್ಲೆಯ ಮೂರೂರು ವಿಷ್ಣು ಭಟ್ಟ ಹಾಗೂ ವೇಷಧಾರಿ ಅಜಿತ್ ಕುಮಾರ್ ಅಂಬಲಪಾಡಿ ಅವರನ್ನು ‘ಟಿ.ವಿ.ರಾವ್ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ ಎಂದು ಚಿಟ್ಟಾಣಿ ಅಭಿಮಾನಿ ಬಳಗದ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಕಾರ್ಯದರ್ಶಿ ಎಂ.ಗೋಪಿಕೃಷ್ಣ ರಾವ್ ತಿಳಿಸಿದ್ದಾರೆ.
ನವೆಂಬರ್ 7ರಂದು ಸಂಜೆ 5.15ಕ್ಕೆ ಕೃಷ್ಣಮಠದ ರಾಜಾಂಗಣದಲ್ಲಿ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿ ತಲಾ ₹10,000 ನಗದು, ಸ್ಮರಣಿಕೆ ಒಳಗೊಂಡಿದೆ ಎಂದು ಹೇಳಿದ್ದಾರೆ.