ಉಡುಪಿ ಸಿವಿಲ್ ಎಂಜಿನಿಯರ್ಸ್‌ ಅಸೋಸಿಯೇಶನ್ (ಯುಸಿಇಎ) ವತಿಯಿಂದ ಸಾಧಕರಿಗೆ ಸರ್.ಎಂ. ವಿಶ್ವೇಶ್ವರಯ್ಯ ಪ್ರಶಸ್ತಿ ಪ್ರಧಾನ

ಉಡುಪಿ: ಉಡುಪಿ ಸಿವಿಲ್ ಎಂಜಿನಿಯರ್ಸ್‌ ಅಸೋಸಿಯೇಶನ್ (ಯುಸಿಇಎ) ವತಿಯಿಂದ ಕಿದಿಯೂರು ಹೊಟೇಲ್‌ನ ಅನಂತಶಯನ ಹಾಲ್‌ನಲ್ಲಿ ಬುಧವಾರ ಎಂಜಿನಿಯರ್ಸ್‌ ದಿನಾಚರಣೆ ಪ್ರಯುಕ್ತ ಸಾಧಕರಿಗೆ ಸರ್.ಎಂ. ವಿಶ್ವೇಶ್ವರಯ್ಯ ಪ್ರಶಸ್ತಿ ಪ್ರಧಾನ, ಗೌರವಾರ್ಪಣೆ ನೆಡೆಯಿತು.

ಸಾಧಕರಿಗೆ ಗೌರವಾರ್ಪಣೆ:
ಮಂಗಳೂರು ಅಸೋಸಿಯೇಶನ್ ಆಫ್ ವ್ಯಾಲ್ಯುವರ್ಸ್‌‌ನ ಅಧ್ಯಕ್ಷ ಸತೀಶ್ ರಾವ್ ಹಾಗೂ ಮಣಿಪಾಲ MITಯಾ ಡಿಪಾರ್ಟ್‌ಮೆಂಟ್ ಆಫ್ ಸಿವಿಲ್ ಎಂಜಿನಿಯರಿಂಗ್‌ನ ಪ್ರಾಧ್ಯಾಪಕ ಡಾ.ಕಿರಣ್ ಕಾಮತ್ ರವರಿಗೆ ಸರ್.ಎಂ. ವಿಶ್ವೇಶ್ವರಯ್ಯ ಪ್ರಶಸ್ತಿ ಪ್ರಧಾನ, ಗೌರವಾರ್ಪಣೆ ನೆಡೆಯಿತು. ವೇದಿಕೆಯಲ್ಲಿ ಸಂಸ್ಥೆಯ ಅಧ್ಯಕ್ಷ ಕೆ. ರಂಜನ್, ಉಪಾಧ್ಯಕ್ಷರಾದ ಗಣೇಶ್ ಬೈಲೂರು, ಭರತ್ ಭೂಷಣ್, ಕೋಶಾಧಿಕಾರಿ ಪಾಡಿಗಾರು ಲಕ್ಷ್ಮೀ ನಾರಾಯಣ ಉಪಾಧ್ಯ, ಪ್ರಧಾನ ಕಾರ್ಯದರ್ಶಿ ಕೆ. ಹರೀಶ್ ಕುಮಾರ್ ಉಪಸ್ಥಿತರಿದ್ದರು.