ಉಡುಪಿ:ಜ.1 ರಂದು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮವು ಜನವರಿ 01 ರಂದು ಬೆಳಗ್ಗೆ 10.15 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ
ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಶಾಸಕರುಗಳಾದ ವಿ. ಸುನಿಲ್ ಕುಮಾರ್,
ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್.
ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ದ.ಕ ಮತ್ತು ಉಡುಪಿ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ ಮೂಲ್ಕಿ, ಕುಂಜಿಬೆಟ್ಟು ರಾಷ್ಟ್ರೀಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ವೆಂಕಟೇಶ್ ಆಚಾರ್ಯ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ದಾಸರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಹಾಗೂ ಮತ್ತಿತರರು ಭಾಗವಹಿಸಲಿದ್ದು, ಕೋಟೇಶ್ವರ ರಥಶಿಲ್ಪಿ ಶ್ರೀ ರಾಜಗೋಪಾಲ ಆಚಾರ್ಯ ಉಪನ್ಯಾಸ ನೀಡಲಿದ್ದಾರೆ.