ಉಡುಪಿ: ಕಲ್ಯಾಣಪುರದ ಮಿಲಾಗ್ರೆಸ್ ಕಾಲೇಜಿನ ತೃತೀಯ ಬಿ.ಎ ವಿದ್ಯಾರ್ಥಿನಿ ಭೂಮಿಕಾ ಮೇಸ್ತಾ ಅವರು ಕರ್ನಾಟಕ ರಾಜ್ಯ ವಾಲಿಬಾಲ್ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿರುವುದು ಕಾಲೇಜಿಗೆ ಹೆಮ್ಮೆಯ ವಿಷಯವಾಗಿದೆ.
ಭುಬನೇಶ್ವರ (ಒಡಿಶಾ) ನಲ್ಲಿ ಮಾರ್ಚ್ 15ರಿಂದ 20ರವರೆಗೆ ನಡೆಯಲಿರುವ 26ನೇ ಯುವ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ತಂಡದ ಪರವಾಗಿ ಭೂಮಿಕಾ ಮೇಸ್ತಾ ಭಾಗವಹಿಸಲಿದ್ದಾರೆ.
ಮಿಲಾಗ್ರೆಸ್ ಕಾಲೇಜು ಕಲ್ಯಾಣಪುರವು ಇತ್ತೀಚೆಗೆ NAAC ನಿಂದ A+ ಗ್ರೇಡ್ ಪಡೆದುಕೊಂಡಿದ್ದು, ವಿದ್ಯಾರ್ಥಿನಿಯ ಈ ಸಾಧನೆ ಕಾಲೇಜಿನ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ಕಾಲೇಜಿನ ವ್ಯವಸ್ಥಾಪಕ ಮಂಡಳಿ, ಪ್ರಾಂಶುಪಾಲರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭೂಮಿಕಾ ಮೇಸ್ತಾಗೆ ಅಭಿನಂದನೆಗಳು ಹಾಗೂ ಶುಭಾಶಯಗಳನ್ನು ತಿಳಿಸಿದರು.
















