ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರಿಂದ ನಗರದ ಬಸ್ ನಿಲ್ದಾಣದಲ್ಲಿ ಮತಯಾಚನೆ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ರವರು ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಸಿಟಿ, ಸರ್ವಿಸ್ ಬಸ್ ನಿಲ್ದಾಣ, ಅಂಗಡಿ-ಮುಂಗಟ್ಟು, ಆಟೋ ನಿಲ್ದಾಣ ಸೇರಿದಂತೆ ಉಡುಪಿ ನಗರ ಭಾಗದಲ್ಲಿ ಮತಯಾಚಿಸಿದರು.

ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಕಾಂಗ್ರೆಸ್ ನಾಯಕರಾದ ಸುರೇಶ್ ಶೆಟ್ಟಿ ಬನ್ನಂಜೆ, ಕುಶಲ್ ಶೆಟ್ಟಿ, ಸುಕೇಶ್, ಮಹಾಬಲ ಕುಂದರ್, ಕಾರ್ಯಕರ್ತರಾದ ಸುದರ್ಶನ್ ಪಡುಕರೆ ಮೊದಲಾದವರು ಉಪಸ್ಥಿತರಿದ್ದರು.