ಉಡುಪಿ: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯು ಇಂದು ಕಾಂಗ್ರೆಸ್ ಭವನದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಮತ್ತು ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿ ವತಿಯಿಂದ ಜರಗಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು, ಮಹಾತ್ಮಾ ಗಾಂಧಿಯವರ ತತ್ವಾದರ್ಶಗಳನ್ನು ಓರ್ವ ವ್ಯಕ್ತಿ, ಒಂದು ಸಂಸ್ಥೆ, ಒಂದು ಪಕ್ಷ ಪಾಲಿಸಿಕೊಂಡು ಬಂದರೆ ಜೀವನ ಪಾವನವಾಗಲು ಬೇರೇನೂ ಬೇಕಾಗಿಲ್ಲ. ಮಹಾತ್ಮಾ ಗಾಂಧೀಜಿಯವರ ಅಹಿಂಸಾ ತತ್ವ ಜನಮನ್ನಣೆಗಳಿಸಿ ದೇಶಕ್ಕೆ ಸ್ವಾತಂತ್ರ್ಯ ಒದಗಿಸಿಕೊಟ್ಟಿತು ಎಂದರು.
ಲಾಲ್ ಬಹದ್ದೂರ್ ಶಾಸ್ತ್ರಿಯವರು ಸರಳ ಸಜ್ಜನಿಕೆಯ ವ್ಯಕ್ತಿತ್ವದಿಂದಾಗಿ ಬರೇ 17 ತಿಂಗಳು ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರೂ ಕೂಡಾ ಶಾಶ್ವತವಾಗಿ ಅವರ ಹೆಸರು ಜನರ ಮನಸಿನಲ್ಲಿ ದಾಖಲಾಗುವಂತೆ ಮಾಡಿದ್ದಾರೆ. ತಾನು ಉಪವಾಸವಿದ್ದು ಜನತೆಗೊದಗಿದ ಸಂಕಷ್ಟ ತೊಲಗಿಸಿಕೊಳ್ಳಲು ಒಂದು ದಿನದ ಊಟ ತ್ಯಜಿಸಿ ಎಂದು ಜನರಿಗೆ ಭೋದಿಸಿದ್ದರು ಎಂದು ಹೇಳಿದರು.
ಚಿಂತಕ, ಬರಹಗಾರ ಕೆಂಚನೂರು ಪ್ರದೀಪ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಯೋಧ ಬಾಲಕೃಷ್ಣ ಭಂಡಾರಿ ಎಲ್ಲೂರು ಹಾಗೂ ಪ್ರಗತಿಶೀಲ ಮಾದರಿ ಕೃಷಿಕ ಸತೀಶ್ ಶೆಟ್ಟೆ ಯಡ್ತಾಡಿ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಹೊಸದಾಗಿ ಆಯ್ಕೆಯಾದ ಕಿಸಾನ್ ಕಾಂಗ್ರೆಸ್ ಪದಾಧಿಕಾರಿಗಳಿಗೆ ಪದಗ್ರಹಣ ನಡೆದು, ಆದೇಶ ಪತ್ರ ನೀಡಲಾಯಿತು.
ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ದಿನೇಶ್ ಪುತ್ರನ್, ನವೀನ್‌ಚಂದ್ರ ಜೆ. ಶೆಟ್ಟಿ, ಹರೀಶ್ ಕಿಣಿ, ಬಿ. ನರಸಿಂಹ ಮೂರ್ತಿ, ನೀರೆ ಕೃಷ್ಣ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಕುಶಲ್ ಶೆಟ್ಟಿ ಇಂದ್ರಾಳಿ, ಪ್ರಶಾಂತ್ ಜತ್ತನ್ನ, ಕೇಶವ ಕೋಟ್ಯಾನ್, ಹಬೀಬ್ ಆಲಿ, ಬಿಪಿನ್ ಚಂದ್ರಪಾಲ್, ಡಾ. ಸುನೀತಾ ಶೆಟ್ಟಿ, ಭುಜಂಗ ಶೆಟ್ಟಿ, ಇಸ್ಮಾಯಿಲ್ ಆತ್ರಾಡಿ, ಉದ್ಯಾವರ ನಾಗೇಶ್ ಕುಮಾರ್, ಫಾ| ವಿಲಿಯಂ ಮಾರ್ಟಿಸ್, ದಿನಕರ್ ಹೇರೂರು, ನವೀನ್‌ಚಂದ್ರ ಸುವರ್ಣ, ರಮೇಶ್ ಕಾಂಚನ್, ಪ್ರವೀಣ್ ಶೆಟ್ಟಿ, ಕಿಶೋರ್ ಎರ್ಮಾಳ್, ಯತೀಶ್ ಕರ್ಕೇರ, ಚಂದ್ರಿಕಾ ಶೆಟ್ಟಿ.
ಮೀನಾಕ್ಷಿ ಮಾಧವ ಬನ್ನಂಜೆ, ಸುರೈಯಾ ಅಂಜುಮ್, ಉದಯ ಹೇರೂರು, ಪ್ರಕಾಶ್ ಪೂಜಾರಿ ಕೆರ್ವಾಶೆ, ರಾಯ್ ಮರ್ವಿನ್ ಫೆರ್ನಾಂಡಿಸ್, ಉದಯ ಶೆಟ್ಟಿ ಕಾರ್ಕಳ, ನಾಗಪ್ಪ ಕೊಟ್ಟಾರಿ ವಂಡ್ಸೆ, ರಾಜೇಶ್ ದೇವಾಡಿಗ, ಗೋವರ್ದನ್ ಜೋಗಿ, ಮಾಧವ ಗಾಣಿಗ, ಭಾಸ್ಕರ್ ಶೆಟ್ಟಿ, ಹರೀಶ್ ಶೆಟ್ಟಿ ಕೀಳಿಂಜೆ, ಸದಾನಂದ ಶೆಟ್ಟಿ. ರಾಘವೇಂದ್ರ ನಾಯಕ್, ರಶ್ಮಿತ, ಗಿಲ್ಬರ್ಟ್ ಡಿ’ಸೊಜಾ, ಕಿರ್ತನ್ ಕುವೆಲ್ಲೋ, ಸೋಮಯ್ಯ ಕಾಂಚನ್, ಲಕ್ಷö್ಮಣ ಮಟ್ಟು, ಎ. ಅಹಮ್ಮದ್, ಹಮದ್ ಮೊದಲಾದವರು ಉಪಸ್ಥಿತರಿದ್ದರು.
ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಶೆಟ್ಟಿ ಎಲ್ಲೂರು ಸ್ವಾಗತಿಸಿದರು. ಕಿಸಾನ್ ಕಾಂಗ್ರೆಸ್ ಉಪಾಧ್ಯಕ್ಷರ ಶೇಖರ್ ಕೆ. ಕೋಟ್ಯಾನ್ ವಂದಿಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ. ಅಣ್ಣಯ್ಯ ಸೇರಿಗಾರ್ ಮತ್ತು ಜ್ಯೋತಿ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು.