ಉಡುಪಿ: ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಫೆ. 22ರಿಂದ ಫೆ.27ರ ವರೆಗೆ ‘ಜನಧ್ವನಿ ಪಾದಯಾತ್ರೆ’ (108 ಕಿ.ಮೀ.) ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಫೆ. 22ರಂದು ಬೆಳಿಗ್ಗೆ 11ಗಂಟೆಗೆ ಹೆಜಮಾಡಿಯಲ್ಲಿ ಪಾದಯಾತ್ರೆ ಉದ್ಘಾಟನೆಗೊಳ್ಳಲಿದೆ. ಬಳಿಕ ಹೆಜಮಾಡಿ ಟೋಲ್ಗೇಟ್ನಿಂದ ಆರಂಭಗೊಂಡು, ಕಾಪು-ಕಟಪಾಡಿ-ಉಡುಪಿ-ಕಲ್ಯಾಣಪುರ-ಸಂತೆಕಟ್ಟೆ-ಬ್ರಹ್ಮಾವರ-ಕುಂದಾಪುರ-ಅರೆಹೊಳೆ-ಬೈಂದೂರಿನಲ್ಲಿ ಪಾದಯಾತ್ರೆ ಮುಕ್ತಾಯವಾಗಲಿದೆ. ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯದ ಮುಖಂಡರು ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕಾಂಗ್ರೆಸ್ ಮುಖಂಡರಾದ ದಿನೇಶ್ ಪುತ್ರನ್, ಬಿ.ನರಸಿಂಹಮೂರ್ತಿ, ಹರೀಶ್ ಕಿಣಿ, ದೀಪಕ್ ಕೋಟ್ಯಾನ್, ಸೌರಭ್ ಬಲ್ಲಾಳ್, ಗೀತಾ ವಾಗ್ಳೆ, ಶಶಿಧರ ಶೆಟ್ಟಿ ಎಲ್ಲೂರು, ಇಸ್ಮಾಯಿಲ್ ಆತ್ರಾಡಿ, ರೋಶನಿ ಒಲಿವೆರಾ, ಭಾಸ್ಕರ ರಾವ್ ಕಿದಿಯೂರು, ಹರೀಶ್ ಶೆಟ್ಟಿ ಪಾಂಗಳ, ದಿನಕರ ಹೇರೂರು, ಕುಶಲಾ ಶೆಟ್ಟಿ, ಹಬೀಬ್ ಆಲಿ, ವೈ.ಸುಕುಮಾರ್, ಶಂಕರ್ ಕುಂದರ್, ಪ್ರವೀಣ್ ಶೆಟ್ಟಿ, ನವೀನ್ಚಂದ್ರ ಸುವರ್ಣ, ಮಂಜುನಾಥ ಪೂಜಾರಿ, ಸದಾಶಿವ ದೇವಾಡಿಗ, ಕಿಶೋರ್ ಕುಮಾರ್ ಎರ್ಮಾಳು ಇದ್ದರು.