ಉಡುಪಿ: ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ಕೂಡಲೇ ಬಂಧಮುಕ್ತಿಗೊಳಿಸದಿದ್ದರೆ ಉಗ್ರ ಪ್ರತಿಭಟನೆಯ ಎಚ್ಚರಿಕೆ

ಉಡುಪಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಹಾಗೂ ಶೀಘ್ರವೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಲಖಿಂಪುರ್ ನಲ್ಲಿ ನಡೆದ ಹಿಂಸಾಚಾರದಲ್ಲಿ ಮೃತರಾದ ರೈತರ ಕುಟುಂಬಗಳಿಗೆ ಸ್ವಾಂತನ ಹೇಳಲು ಪ್ರಿಯಾಂಕ ಗಾಂಧಿ ತೆರಳಿದ್ದರು. ಈ ವೇಳೆ ಅವರನ್ನು ಪೊಲೀಸರು ಅಡ್ಡಗಟ್ಟಿ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಲು ಅವಕಾಶ ನೀಡದೆ ಬಂಧಿಸಿರುವುದು ಖಂಡನೀಯ. ಅವರನ್ನು ಕೂಡಲೇ ಬಿಡುಗಡೆ ಮಾಡದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಎಚ್ಚರಿಕೆ ನೀಡಿದೆ.

ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು ಅವರಿಗೆ ಅಶೋಕ್ ಕುಮಾರ್ ಕೊಡವೂರು ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ವೆರೋನಿಕಾ ಕರ್ನೇಲಿಯೋ, ನವೀನ್‌ಚಂದ್ರ ಜೆ. ಶೆಟ್ಟಿ, ಶ್ಯಾಮಲ ಭಂಡಾರಿ, ಅಲೆವೂರು ಹರೀಶ್ ಕಿಣಿ, ಡಾ ಸುನಿತಾ ಶೆಟ್ಟಿ, ಮಂಜುನಾಥ ಪೂಜಾರಿ, ಸದಾಶಿವ ದೇವಾಡಿಗ, ದಿನಕರ್ ಹೇರೂರು, ಶಂಕರ್ ಕುಂದರ್, ಪ್ರಖ್ಯಾತ್ ಶೆಟ್ಟಿ, ಸಂಪಿಗಹಾಡಿ ಸಂಜೀವ ಶೆಟ್ಟಿ, ನೀರೆ ಕೃಷ್ಣ ಶೆಟ್ಟಿ, ಬಿಪಿನ್‌ಚಂದ್ರ ಪಾಲ್, ಭಾಸ್ಕರ್ ರಾವ್ ಕಿದಿಯೂರು, ದೇವಾನಂದ ಶೆಟ್ಟಿ, ದೇವಕಿ ಸಣ್ಣಯ್ಯ, ಕೀರ್ತಿ ಶೆಟ್ಟಿ, ಹಬೀಬ್ ಆಲಿ, ಕಿಶೋರ್ ಎರ್ಮಾಳ್, ಗೀತಾ ವಾಗ್ಳೆ, ಜ್ಯೋತಿ ಹೆಬ್ಬಾರ್, ರೋಶನಿ ಒಲಿವರ್, ಶಶಿಧರ ಶೆಟ್ಟಿ ಎಲ್ಲೂರು, ಬಿ. ಭುಜಂಗ ಶೆಟ್ಟಿ. ಡೆರಿಕ್ ಡಿಸೋಜಾ, ಅಖಿಲೇಶ್ ಕೋಟ್ಯಾನ್, ಉದ್ಯಾವರ ನಾಗೇಶ್ ಕುಮಾರ್, ಹರೀಶ್ ಶೆಟ್ಟಿ ಪಾಂಗಾಳ, ಜಯರಾಮ್ ನಾಯ್ಕ್, ರೋಶನ್ ಶೆಟ್ಟಿ, ಲೂಯಿಸ್ ಲೋಬೊ, ಗಣೇಶ್ ಪೂಜಾರಿ, ಮೀನಾಕ್ಷಿ ಮಾಧವ ಬನ್ನಂಜೆ, ಯತೀಶ್ ಕರ್ಕೇರಾ, ಸೂರ್ಯ ಸಾಲ್ಯಾನ್, ಶಾಂತಿ ಪಿರೇರಾ, ಚಂದ್ರಾವತಿ ಭಂಡಾರಿ, ಸುಗಂಧಿ ಶೇಖರ್, ಅನಿತಾ ಡಿ’ಸೋಜಾ, ಸೀಮಾ ಮಾರ್ಗರೇಟ್, ನತಾಲಿಯಾ ಮಾರ್ಟಿಸ್, ಹಮದ್, ಲಕ್ಷೀಶ ಶೆಟ್ಟಿ ಮೊದಲಾದವರು ಹಾಜರಿದ್ದರು.