ಉಡುಪಿ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಕೊನೆ ಕ್ಷಣದಲ್ಲಿ ಬಂಡಾಯ ಅಭ್ಯರ್ಥಿ ಅಮೃತ್ ಶೆಣೈ ನಾಮಪತ್ರ 

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಪ್ರಮೋದ್ ಮಧ್ವರಾಜ್ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಯುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಎಐಸಿಸಿ ಸದಸ್ಯ ಅಮೃತ್ ಶೆಣೈ ಇಂದು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೂಲಕ ಬಂಡಾಯ ಸಾರಿದ್ದಾರೆ.
ಅಂತಿಮ ಕ್ಷಣದಲ್ಲಿ ಸ್ಪರ್ಧೆಯ ಕುರಿತು ನಿರ್ಧಾರ ತೆಗೆದುಕೊಂಡ ಅಮೃತ್ ಶೆಣೈ ಮಧ್ಯಾಹ್ನ 2.45ರ ಸುಮಾರಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರವನ್ನು ಸಲ್ಲಿಸಿದರು. ಅವರೊಂದಿಗೆ ಯಜ್ಞೇಶ್ ಆಚಾರ್ಯ, ಮನೋವೈದ್ಯ ಡಾ.ಪಿ.ವಿ. ಭಂಡಾರಿ, ಅಲೆನ್ ರೋಹನ್ ವಾಜ್, ಅನಿತಾ ಡಿಸೋಜ ಹಾಜರಿದ್ದರು.