Home » ಉಡುಪಿ: 62 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 471ಕ್ಕೆ ಏರಿಕೆ
ಉಡುಪಿ: 62 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 471ಕ್ಕೆ ಏರಿಕೆ
ಉಡುಪಿ: ಜಿಲ್ಲೆಯಲ್ಲಿ ಇಂದು ಹೊಸದಾಗಿ 62 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 62 ಸೋಂಕಿತರ ಪೈಕಿ 43 ಪುರುಷರು, 15 ಮಹಿಳೆಯರು ಹಾಗೂ ನಾಲ್ಕು ಮಕ್ಕಳು ಇದ್ದಾರೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಇದರಲ್ಲಿ ಬಹುತೇಕ ಸೋಂಕಿತರು ಮುಂಬೈಯಿಂದ ಬಂದವರಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 471 ಕ್ಕೆ ಏರಿಕೆಯಾಗಿದೆ.