ಉಡುಪಿ ಮಾ.26: ಕಾರ್ಮಿಕ ಇಲಾಖೆ ಉಡುಪಿ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಉಡುಪಿ ಘಟಕದ ವತಿಯಿಂದ , ಅಸಂಘಟಿತ ವಲಯದ ಕಟ್ಟಡ ಕಾರ್ಮಿಕರಿಗೆ , ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಮತ್ತು ಸೋಪುಗಳನ್ನು ಬುಧವಾರ ವಿತರಿಸಲಾಯಿತು.
ಪ್ರಥಮ ಹಂತದಲ್ಲಿ ಉಡುಪಿಯ ಬೀಡಿನಗುಡ್ಡೆಯ ಲೇಬರ್ ಕಾಲೋನಿ ಹಾಗೂ ಸುತ್ತಮುತ್ತಲಿದ್ದ 500 ಮಂದಿ ಕಾರ್ಮಿಕರಿಗೆ ಪ್ರತಿ ಮನೆಗೆ 1 ಮಾಸ್ಕ್ ಮತ್ತು 2 ಸೋಪುಗಳನ್ನು ಹಾಗೂ ಕೊರೋನಾ ನಿಯಂತ್ರಣ ಕುರಿತ ಮುನ್ನೆಚ್ಚರಿಕಾ ಕ್ರಮಗಳ ಕುರಿತ ಕರಪತ್ರಗಳನ್ನು ವಿತರಿಸಲಾಗಿದ್ದು, ಜಿಲ್ಲೆಯಲ್ಲಿನ ಎಲ್ಲಾ ಕಟ್ಟಡ ಕಾರ್ಮಿಕರಿಗೆ ಮಾಸ್ಕ್ ಮತ್ತು ಸೋಪುಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ರೆಡ್‍ಕ್ರಾಸ್ ಉಡುಪಿ ಘಟಕದ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ, ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಡಾ. ಕೀರ್ತಿ ಪಾಲನ್, ಕಾರ್ಮಿಕ ನಿರೀಕ್ಷಕರಾದ ಪ್ರವೀಣ್ ಕುಮಾರ್, ಜೀವನ್ ಕುಮಾರ್ ಹಾಗೂ ಉಡುಪಿ ಜಿಲ್ಲೆಯ ಕರೋನಾ ಸೈನಿಕರು ಹಾಗೂ ರೆಡ್‍ಕ್ರಾಸ್ ಸಿಬ್ಬಂದಿ ಭಾಗವಹಿಸಿದ್ದರು.