ಉಡುಪಿ: ಕೊರೊನಾ ಸೋಂಕು ಇಳಿಮುಖ; ಇಂದಿನ ಕೊರೊನಾ ಪ್ರಕರಣಗಳ ವಿವರ

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಇಳಿಕೆ ಕಂಡಿದ್ದು, ಇಂದು (ಜೂನ್ 12) 258 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕಿನಲ್ಲಿ 133, ಕುಂದಾಪುರ ತಾಲೂಕಿನಲ್ಲಿ 75, ಕಾರ್ಕಳ ತಾಲೂಕಿನಲ್ಲಿ‌ 47 ಹಾಗೂ ಹೊರ ಜಿಲ್ಲೆಯ 3 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 3348 ಇಳಿದಿದೆ.

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಉಡುಪಿ ತಾಲೂಕಿನ 68 ವರ್ಷದ ಮಹಿಳೆ ಹಾಗೂ ಕುಂದಾಪುರ 43 ವರ್ಷದ ಸೋಂಕಿನಿಂದ ಅಸುನೀಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 356 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಜೂನ್ 11ರಂದು ಜಿಲ್ಲೆಯಲ್ಲಿ 625 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಆ ಮೂಲಕ ಕೋವಿಡ್ ಎರಡನೇ ಅಲೆಯಲ್ಲಿ ಈವರೆಗೆ ಒಟ್ಟು 36929 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 264862 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 40443 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಬ್ಲ್ಯಾಕ್ ಫಂಗಸ್ ವಿವರ: ಇಂದು ಹೊರ ಜಿಲ್ಲೆಯ ಓರ್ವ ಬ್ಲ್ಯಾಕ್ ಫಂಗಸ್ ರೋಗಿ‌ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ಎರಡು ಮಂದಿ ಬ್ಲ್ಯಾಕ್ ಫಂಗಸ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 6 ಮಂದಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.