ಉಡುಪಿ ಮಾರ್ಚ್ 19: ಸರ್ಕಾರದ ಆದೇಶದಂತೆ, ಉಡುಪಿ ಜಿಲ್ಲಾಧಿಕಾರಿಗಳ ಮಾ.18 ರ ಆದೇಶದಲ್ಲಿ ತಿಳಿಸಿರುವಂತೆ, ಕೋವಿಡ್ (ಕೊರೊನಾ ವೈರಾಣು ಕಾಯಿಲೆ-2019) ನ ಸೋಂಕು ಹರಡುವುದನ್ನು ತಡೆಗಟ್ಟಲು, ಜನಸಂದಣಿ ಸೇರುವ ಕಾರ್ಯಗಳಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚು ಇರುವ ಕಾರಣದಿಂದ ಸಾರ್ವಜನಿಕರು ಕೆಲವು ವಿಶೇಷ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ ಸೂಚಿಸಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಉಡುಪಿ ಜಿಲ್ಲೆಯಲ್ಲಿ ಜರುಗುವ ಎಲ್ಲಾ ಧಾರ್ಮಿಕ ಸಂಸ್ಥೆಗಳಿಗೆ ಸೇರಿದ ಜಾತ್ರೆಗಳು, ಸಭೆ, ಸಮಾರಂಭಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ವಾರದ ಸಂತೆ, ಜಾತ್ರೆ, ಉತ್ಸವ, ಸಾಮೂಹಿಕ ವಿವಾಹಗಳು ಹಾಗೂ ಇನ್ನಿತರ ಕಾರ್ಯಕ್ರಮಗಳನ್ನು ಮುಂದಿನ ಆದೇಶದವರೆಗೆ ನಿಷೇಧಿಸಲಾಗಿದೆ ಎಂದು ನಗರಸಭೆಯ ಪೌರಾಯುಕ್ತ ಆನಂದ ಕಲ್ಲೋಳಿಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.