ಉಡುಪಿ: ಇಂದು 125 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಉಡುಪಿ: ಜಿಲ್ಲೆಯಲ್ಲಿ ಇಂದು 125 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 2122 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಜಿಲ್ಲೆಯಲ್ಲಿ ಇನ್ನು ಸಹ 1251ಸಕ್ರಿಯ ಕೊರೊನಾ ಪ್ರಕರಣಗಳಿವೆ ಎಂದು ತಿಳಿಸಿದೆ.