ಉಡುಪಿ: ಇಂದು 34 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್: ಜಿಲ್ಲೆಯಲ್ಲಿ ಒಟ್ಟು 1765 ಮಂದಿ ಕೊರೊನಾದಿಂದ ಗುಣಮುಖ

ಉಡುಪಿ: ಜಿಲ್ಲೆಯಲ್ಲಿ ಇಂದು 34 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 1765 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಹರಡುವಿಕೆ ಹೆಚ್ಚಳವಾಗಿದ್ದು, ಇಂದು ಒಂದೇ ದಿನ 281 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇನ್ನು ಜಿಲ್ಲೆಯಲ್ಲಿ 910 ಸಕ್ರಿಯ ಕೊರೊನಾ ಪ್ರಕರಣಗಳಿವೆ.
ಇಂದು ಒಬ್ಬರು ಕೊರೊನಾದಿಂದ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಈವರೆಗೆ 11 ಮಂದಿ ಕೊರೊನಾದಿಂದ ಮರಣ ಹೊಂದಿದ್ದಾರೆ ಎಂದು ಮಾಹಿತಿ ನೀಡಿದೆ.