ಉಡುಪಿ: ಮುಂಬೈನಿಂದ ಉಡುಪಿ ಜಿಲ್ಲೆಗೆ ಬಂದಿರುವ 9 ವರ್ಷದ ಬಾಲಕಿ ಸೇರಿದಂತೆ ಜಿಲ್ಲೆಯಲ್ಲಿ ಇಂದು ಮೂರು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ರಾಜ್ಯ ಕುಟುಂಬ ಹಾಗೂ ಆರೋಗ್ಯ ಇಲಾಖೆ ಮಧ್ಯಾಹ್ನ ಬಿಡುಗಡೆಗೊಳಿಸಿದ ಕೊರೊನಾ ಬುಲೆಟಿನ್ ನಲ್ಲಿ ಮಾಹಿತಿ ತಿಳಿದುಬಂದಿದೆ.
ಮುಂಬೈನಿಂದ ಜಿಲ್ಲೆಗೆ ಬಂದಿರುವ 9 ವರ್ಷದ ಬಾಲಕಿ, 27 ವರ್ಷದ ಯುವಕ ಹಾಗೂ 30 ವರ್ಷದ ಮಹಿಳೆಯಲ್ಲಿ ಸೋಂಕು ಕಾಣಿಸಿಕೊಂಡಿದೆ.