ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, ಇಂದು (ಏ.30)ಜಿಲ್ಲೆಯಲ್ಲಿ 660 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 2,596ಕ್ಕೆ ಏರಿಕೆಯಾಗಿದೆ.
ಉಡುಪಿ ತಾಲ್ಲೂಕಿನಲ್ಲಿ 346, ಕುಂದಾಪುರ 217, ಕಾರ್ಕಳ 93 ಹಾಗೂ ಹೊರ ಜಿಲ್ಲೆಯ ನಾಲ್ವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಏ.29ರಂದು 2763 ಮಂದಿಯನ್ನು ಕೊರೊನಾ ಪರೀಕ್ಷೆ ಒಳಪಡಿಸಲಾಗಿದೆ. 419 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಎರಡು ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಉಡುಪಿ ತಾಲೂಕಿನ 73 ವರ್ಷದ ವೃದ್ಧ ಹಾಗೂ 50 ಮಹಿಳೆ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 504114 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 31542 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ 28,748 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ 198 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.