ಉಡುಪಿ: ಐದು ಮಂದಿ ಕೊರೊನಾ ಶಂಕಿತರು ಪತ್ತೆ: ಆಸ್ಪತ್ರೆಗೆ ದಾಖಲು

ಉಡುಪಿ: ಜಿಲ್ಲೆಯಲ್ಲಿ ಇಂದು ಐವರು ಕೊರೊನಾ ಶಂಕಿತರು ಪತ್ತೆಯಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.
ನಾಲ್ವರು ಪುರುಷರು ಹಾಗೂ ಓರ್ವ ಮಹಿಳೆ ಸೇರಿದಂತೆ ಐದು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅದರಲ್ಲಿ ಮೂವರು ಸ್ಥಳೀಯರಾಗಿದ್ದು, ಉಳಿದ ಇಬ್ಬರು ವಿದೇಶದಿಂದ ಬಂದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.