ಉಡುಪಿಯಲ್ಲಿ ಹೊಸದಾಗಿ 21 ಮಂದಿ ಕೊರೊನಾ ಶಂಕಿತರು ಪತ್ತೆ: ಆಸ್ಪತ್ರೆಗೆ ದಾಖಲು

ಉಡುಪಿ: ಜಿಲ್ಲೆಯಲ್ಲಿ ಹೊಸದಾಗಿ 21 ಮಂದಿ ಕೊರೊನಾ ಶಂಕಿತರು ಪತ್ತೆಯಾಗಿದ್ದು, ಎಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 124 ಮಂದಿ ಕೊರೊನಾ ಶಂಕಿತರನ್ನು ಗುರುತಿಸಲಾಗಿದ್ದು, ಎಲ್ಲರ ರಕ್ತದ ಮಾದರಿ ಹಾಗೂ ಗಂಟಲಿನ ದ್ರವ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದರಲ್ಲಿ 92 ಮಂದಿಯ ವೈದ್ಯಕೀಯ ವರದಿ ಬಂದಿದ್ದು, ಓರ್ವನಿಗೆ ಕೊರೊನಾ ಪಾಸಿಟಿವ್ ಹಾಗೂ ಉಳಿದೆಲ್ಲರಿಗೆ ನೆಗೆಟಿವ್ ವರದಿ ಬಂದಿದೆ. ಇಂದು ದಾಖಲಾದ ಶಂಕಿತರು ಸೇರಿದಂತೆ ಒಟ್ಟು 32 ಮಂದಿಯ ವೈದ್ಯಕೀಯ ವರದಿ ಬರಲು ಬಾಕಿ ಇದೆ ಎಂದು ಮಾಹಿತಿ‌ ನೀಡಿದ್ದಾರೆ.