ಉಡುಪಿ: ಜಿಲ್ಲೆಯಲ್ಲಿ ಮತ್ತೆರಡು ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ಅವರು ಮಾಹಿತಿ ನೀಡಿದ್ದು, ವಿದೇಶದಿಂದ ಬಂದ 35 ವರ್ಷದ ವ್ಯಕ್ತಿ ಹಾಗೂ 29 ವರ್ಷದ ಇನ್ನೋರ್ವ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಮಾಹಿತಿ ನೀಡಿದ್ದಾರೆ. ಇದೀಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.