ಉಡುಪಿ: ಜಿಲ್ಲೆಯಲ್ಲಿ ಇಂದು ಹೊಸದಾಗಿ 11 ಮಂದಿ ಕೊರೊನಾ ಶಂಕಿತರು ಪತ್ತೆಯಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಎಲ್ಲ 11 ಮಂದಿಯ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಜಿಲ್ಲೆಯಲ್ಲಿ ಮಂಗಳವಾರದ ವರೆಗೆ ಒಟ್ಟು 76 ಕೊರೊನಾ ಶಂಕಿತರು ಆಸ್ಪತ್ರೆಗೆ ದಾಖಲಾಗಿದ್ದು, ಅದರಲ್ಲಿ ಒಬ್ಬ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಉಳಿದವರೆಲ್ಲರ ವೈದ್ಯಕೀಯ ವರದಿಯಲ್ಲಿ ನೆಗೆಟಿವ್ ಫಲಿತಾಂಶ ಬಂದಿದೆ. ಈವರೆಗೆ ಜಿಲ್ಲೆ 87 ಕೊರೊನಾ ಶಂಕಿತರನ್ನು ಗುರುತಿಸಲಾಗಿದೆ ಎಂದು ಡಿಎಚ್ ಒ ತಿಳಿಸಿದ್ದಾರೆ.












