ಉಡುಪಿ: ಜಿಲ್ಲೆಯಲ್ಲಿ ಇಂದು 16 ಮಂದಿ ಕೊರೊನಾ ಶಂಕಿತರು ಪತ್ತೆಯಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ಅವರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 103 ಮಂದಿ ಕೊರೊನಾ ಶಂಕಿತರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ಅದರಲ್ಲಿ 80 ಮಂದಿಯ ವೈದ್ಯಕೀಯ ವರದಿ ಬಂದಿದೆ. ಓರ್ವನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಉಳಿದ 79 ಮಂದಿಯ ವರದಿಯಲ್ಲಿ ನೆಗೆಟಿವ್ ಬಂದಿದೆ. ಇಂದು ದಾಖಲಾದವರು ಸೇರಿದಂತೆ 23 ಮಂದಿ ಶಂಕಿತರ ವೈದ್ಯಕೀಯ ವರದಿ ಬರಬೇಕಾಗಿದೆ ಎಂದು ಮಾಹಿತಿ ನೀಡಿದ್ದಾರೆ.